ನ್ಯೂಜಿಲೆಂಡ್ ವಿರುದ್ದ ನಡೆಯಲಿರುವ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು (Team India T2o Squad) ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ (Rohit Sharma Captain) ಆಯ್ಕೆಯಾಗಿದ್ದಾರೆ. ಹಾಗೆಯೇ ಉಪನಾಯಕನ ಜವಾಬ್ದಾರಿ ಕೆಎಲ್ ರಾಹುಲ್ (KL Rahul) ಅವರಿಗೆ ವಹಿಸಲಾಗಿದೆ. 16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಕೊಹ್ಲಿ, ಶಮಿ, ಬುಮ್ರಾ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಇನ್ನು ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ವೆಂಕಟೇಶ್ ಅಯ್ಯರ್ ಹಾಗೂ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಯುಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್ಗಳಾಗಿ ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ತಂಡದಲ್ಲಿದ್ದಾರೆ. ಟಿ20 ವಿಶ್ವಕಪ್ ತಂಡದಲ್ಲಿದ್ದ ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ಹಾಗೂ ರಾಹುಲ್ ಚಹರ್ ಅನ್ನು ಈ ಬಾರಿ ತಂಡದಿಂದ ಕೈ ಬಿಡಲಾಗಿದೆ.