ಪುನೀತ್ ರಾಜ್ಕುಮಾರ್ ಹಾಗೂ ರಾಧಿಕಾ ಪಂಡಿತ್ ‘ದೊಡ್ಮನೆ ಹುಡುಗ’, ‘ಹುಡುಗರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಹೀಗಾಗಿ, ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಪುನೀತ್ ನಿಧನ ಹೊಂದಿರುವ ವಿಚಾರ ರಾಧಿಕಾಗೆ ತೀವ್ರ ನೋವನ್ನು ತಂದಿದೆ. ಆದರೆ, ಈ ಬಗ್ಗೆ ಅವರು ಯಾವುದೇ ಪೋಸ್ಟ್ ಹಾಕಿರಲಿಲ್ಲ. ಈಗ ರಾಧಿಕಾ ಅವರು ಪುನೀತ್ ಬಗ್ಗೆ ಬರೆದುಕೊಂಡಿದ್ದು, ನಮಗೆಲ್ಲ ನೆನಪಿನಲ್ಲಿ ನೀವೀಗ ಎಂದಿಗಿಂತ ಸನಿಹ ಎಂದಿದ್ದಾರೆ
ಪುನೀತ್ ಜತೆ ಇರುವ ಫೋಟೋ ಪೋಸ್ಟ್ ಮಾಡಿರುವ ರಾಧಿಕಾ ಪಂಡಿತ್, ‘ನೀವಿಲ್ಲ ಎಂಬುದನ್ನು ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ನಿಮ್ಮ ಜಾಗವನ್ನು ಕನ್ನಡ ಚಿತ್ರರಂಗದಲ್ಲಿ ತುಂಬಲು ಬೇರೆ ಯಾರಿಂದಲು ಸಾಧ್ಯವಿಲ್ಲ. ನೀವಿಲ್ಲದೆ ಚಿತ್ರರಂಗ ಎಂದಿನಂತೆ ಇರುವುದಿಲ್ಲ. ನಿಮ್ಮ ಜತೆ ಕೆಲಸ ಮಾಡಲು ಸಿಕ್ಕಿದ್ದು ನಮ್ಮ ಅದೃಷ್ಟ. ನಮಗೆಲ್ಲ ನೆನಪಿನಲ್ಲಿ ನೀವೀಗ ಎಂದಿಗಿಂತ ಸನಿಹ’ ಎಂದು ಬರೆದುಕೊಂಡಿದ್ದಾರೆ.
ರಾಧಿಕಾ ಪಂಡಿತ್, ಪುನೀತ್ ಒಟ್ಟಾಗಿ ನಟಿಸಿದ್ದ ‘ಹುಡುಗರು’ ಸಿನಿಮಾ ಯಶಸ್ಸು ಕಂಡಿತ್ತು. ‘ದೊಡ್ಮನೆ ಹುಡುಗ’ ಸಿನಿಮಾ ಕೂಡ ಮೆಚ್ಚುಗೆ ಪಡೆದುಕೊಂಡಿತ್ತು. ಸದ್ಯ, ರಾಧಿಕಾ ಪಂಡಿತ್ ನಟನೆಯಿಂದ ದೂರ ಉಳಿದಿದ್ದಾರೆ. ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಮಕ್ಕಳ ಪಾಲನೆಯಲ್ಲಿ ಅವರು ತೊಡಗಿಕೊಂಡಿದ್ದಾರೆ.