Breaking News

ಬಸ್ಸಲ್ಲಿ ಜೋರಾಗಿ ಹಾಡು ಹಾಕಿದ್ರೆ ಬೀಳುತ್ತೆ ಕೇಸ್: KKRTC ಹೊಸ ಸುತ್ತೋಲೆಯಲ್ಲಿ ಏನಿದೆ?

Spread the love

ಸ್ ಪ್ರಯಾಣ ಅಂದ್ರೆ ಒಂದು ನಿರ್ಧಿಷ್ಟ ಸ್ಥಳದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರು ಕುಳಿತಿರುತ್ತಾರೆ, ಮಕ್ಜಳು, ಹಿರಿಯರು, ವೃದ್ಧರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಪ್ರಯಾಣಿಕರು ಇರುತ್ತಾರೆ, ಆದ್ರೆ ಯಾರೋ ಓರ್ವ ಪ್ರಯಾಣಿಕ ಮೊಬೈಲ್ ಜೋರಾಗಿ ಶಬ್ಧ ಮಾಡಿಕೊಂಡು ಹಾಡು ಕೇಳೋದು ಮತ್ತೊಬ್ಬರಿಗೆ ಅಹಿತಕರವಾಗಿರುತ್ತದೆ.

 

 

 

 

ಈ ಹಿನ್ನೆಲೆ ಪ್ರಯಾಣಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸ ಸುತ್ತೋಲೆ ಹೊರಡಿಸಿದೆ. ಸಾರಿಗೆ ನಿಗಮದ ಹೊಸ ಆದೇಶವನ್ನು ಸಾರ್ವಜನಿಕರು ಸಹ ಸ್ವಾಗತಿಸಿದ್ದಾರೆ. ಬಸ್ ಪ್ರಯಾಣದ ವೇಳೆ ಜೋರಾಗಿ ಶಬ್ಧ ಮಾಡುವವರು ಈ ನಿಯಮವನ್ನು ಪಾಲಿಸಬೇಕು.

 

ಇನ್ಮುಂದೆ ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಬಳಸಿ ಜೋರಾಗಿ ಶಬ್ಧ ಮಾಡುವುದು ನಿಷಿದ್ಧ. ಪ್ರಯಾಣದ ವೇಳೆ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

 

ಒಂದು ವೇಳೆ ಹಾಕಿದರೆ ಮೊದಲು ಬಸ್ ನಿರ್ವಾಹಕ ಪ್ರಯಾಣಿಕನಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಪ್ರಯಾಣಿಕರನ್ನು ಅಲ್ಲೇ ಇಳಿಸಿ ಮುಂದುವರೆಯಬೇಕು. ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು ಎಂದು ತಿಳಿಸಲಾಗಿದೆ.

 

ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ, ಬಸ್ ನಲ್ಲಿ ಜೋರಾಗಿ ಹಾಡು ಕೇಳುವುದು ಕಾನೂನು ಬಾಹಿರವಾಗಿದೆ. ಬಸ್ ಗಳಲ್ಲಿ ಜೋರಾಗಿ ಶಬ್ದ ಉಂಟು ಮಾಡಿ ಮೊಬೈಲ್ ಬಳಸುವುದಕ್ಕೆ ಸಂಪೂರ್ಣ ನಿರ್ಬಂಧ ಹಾಕಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ