ಬೆಳಗಾವಿ : ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರ ರಾಜ್ಯದ ಗಮನ ಸೆಳೆದಿದ್ದು, ಬುಧವಾರ ಪೊಲೀಸ ಅಧಿಕಾರಿಗಳು ರಾಯಣ್ಣ ಅಭಿಮಾನಿಗಳೊಂದಿಗೆ ನಡೆಸಿದ ಸಭೆ ಸಂಧಾನ ವಿಫಲವಾಗಿದೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸಭೆ ನಡೆಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗುಂಟೆ ಜಾಗ ಕೊಡಿಸಲಾಗುತ್ತದೆ. ಆ ಸ್ಥಳದಲ್ಲಿ ಮೂರ್ತಿ ಸ್ಥಾಪನೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಆದರೆ ಈ ನಿರ್ಧಾರಕ್ಕೆ ಒಪ್ಪದ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು, ಹಲವು ವರ್ಷಗಳಿಂದ ಪೀರನವಾಡಿ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಹೋರಾಟ ನಡೆಸಿದ್ದೆವೆ. ಅಲ್ಲಿಯೇ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.
ಈ ವಿವಾದ ಕುರಿತು ಸಿದ್ದರಾಮಯ್ಯ ಅವರು ಸಹ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಾದವನ್ನು ಬಗೆ ಹರಿಸಿಕೊಳ್ಳಿ ಎಂದು ಟ್ವಿಟ್ ಕೂಡಾ ಮಾಡಿದ್ದರು. ಈ ಹಿನ್ನೆಲೆ ಸಭೆ ನಡೆದಿತ್ತು. ಆದ್ರೆ ಸಭೆ ವಿಫಲವಾಗಿದೆ.