ಬೀದರ: ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ನಡೆದಿದ್ದು, ಸ್ಥಳೀಯ ನಿವಾಸಿಗರನ್ನು ಬೆಚ್ಚಿ ಬಿಳಿಸಿದೆ.
ಔರಾದ ತಾಲೂಕಿನ ಕರಂಜಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವಿಜಯಕುಮಾರ ಟಿಳೇಕರ್ (45) ಹತ್ಯೆಗೀಡಾದ ಶಿಕ್ಷಕ ಎಂದು ಗುರುತಿಸಲಾಗಿದೆ.
ಮೂಲತ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದವರಾಗಿರುವ ಶಿಕ್ಷಕ ಟಿಳೇಕರ್ ಸಧ್ಯ ಔರಾದನ ಲೀಡ್ಕರ್ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು.
ಬೀದರ ನಾಂದೇಡ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಸಮೀಪ ಮೃತ ದೇಹ ಪತ್ತೆಯಾಗಿದ್ದು, ಹತ್ಯೆ ಮಾಡಿದ್ದು ಯಾರು? ಹತ್ಯೆಗೆ ಕಾರಣ ಏನು ಎನ್ನುವುದು ಪೊಲೀಸ್ ತನಿಖೆಯಿಂದಲೇ ತಿಳಿದು ಬರಬೇಕಿದೆ.
ಘಟನಾ ಸ್ಥಳಕ್ಕೆ ಎಸ್ ಪಿ ಡಿ.ಎಲ್.ನಾಗೇಶ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಔರಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.