ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ಅನಿಲ್ ಮದಾನ, ಉಮೇಶ್ ಶಿವಕುಮಾರ್ ಮಡಿವಾಳ ಬಂಧಿತ ಆರೋಪಿಗಳು. ಬಂಧಿತರಿಂದ 400 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ನಗರದ ಸಪ್ತಾಪುರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳು ಶಿವಗಿರಿ, ಸಾಯಿ ಹಾಸ್ಟೇಲ್, ಜಯನಗರಗಳಲ್ಲಿ ಗಾಂಜಾ ಮಾರುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ಓದಲೆಂದು ಬಂದ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರುತ್ತಿದ್ದರು ಎನ್ನಲಾಗಿದೆ.
Laxmi News 24×7