ಕಡಬ: ಕೋಡಿಂಬಾಳ ಗ್ರಾಮದಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ತನ್ನ ಸಂಬಂಧಿಕರಾಗಿರುವ ಅಪ್ರಾಪ್ತೆಯನ್ನು ಕಳೆದ ಒಂದೂವರೆ ವರ್ಷದಿಂದ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದೀಗ ಆಕೆ ಗರ್ಭವತಿಯಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.
2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಗರ್ಭವತಿಯಾದ ಬಗ್ಗೆ ಬಾಲಕಿ ಯಾರಿಗೂ ಮಾಹಿತಿ ನೀಡಿರಲಿಲ್ಲ. ಆಕೆ ಅಸ್ವಸ್ಥಗೊಂಡಿದ್ದು, ಈ ಸಂಬಂಧ ತಪಾಸಣೆಗಾಗಿ ತನ್ನ ಅಜ್ಜಿಯೊಂದಿಗೆ ಕಡಬ ಸಮುದಾಯ ಆಸ್ಪತ್ರೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಗರ್ಭಿಣಿಯಾಗಿರುವ ವಿಚಾರ ವೈದ್ಯರಿಂದ ತಿಳಿದ ಬಳಿಕ ಹೆಚ್ಚಿನ ಪರೀಕ್ಷೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷೆ ನಡೆಸಿದಾಗ ಬಾಲಕಿ ಒಂದೂವರೆ ತಿಂಗಳ ಗರ್ಭಿಣಿ ಎಂಬುದು ದೃಢಪಟ್ಟಿದೆ.