Breaking News

ರಾಜ್ಯದಲ್ಲಿ ನಾನೂ ಸೇರಿ ನಾಲ್ವರು ಸಿಎಂ ಆಗಬಹುದು ಎಂದ HDK

Spread the love

ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಚರ್ಚೆ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಬದಲಾವಣೆ ವಿಚಾರ ಕೂಡ ಮುನ್ನಲೆಗೆ ಬಂದಿದ್ದು, ಇದೀಗ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾನು ಸೇರಿದಂತೆ ರಾಜ್ಯದಲ್ಲಿ ನಾಲ್ವರು ಸಿಎಂ ಆಗಬಹುದು ಎಂದಿದ್ದಾರೆ.

 

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಜಾಗತಿಕ ಮಟ್ಟದಲ್ಲೂ ಭಾರತದ ಮೇಲೆ ಕೂಡ ವಿಶ್ವಾಸ ಕಡಿಮೆಯಾಗಿದೆ ಎಂದರು.

ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮೂವರು ಸಿಎಂ ಆಗಬಹುದು ಎಂಬ ಮಾತು ಕೇಳಿಬರುತ್ತಿದೆ. ರಾಜ್ಯದಲ್ಲಿ ಮೂವರಲ್ಲ, ನನ್ನನ್ನೂ ಸೇರಿಸಿ ನಾಲ್ವರು ಮುಖ್ಯಮಂತ್ರಿಗಳು ಆಗಬಹುದು ಎಂದು ಹೇಳಿದರು.

ಇದೇ ವೇಳೆ ಬಿಟ್ ಕಾಯಿನ್ ಹಗರಣ ಕುರಿತು ಮಾತನಾಡಿದ ಅವರು, ಬಿಟ್ ಕಾಯಿನ್ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದ್ದಾದರೂ ಹೇಗೆ? ಆತನಿಗೆ ಜಾಮೀನು ನೀಡಿದ್ದು ಯಾರು? ಹಲವರ ಹೆಸರು ಪ್ರಕರಣದಲ್ಲಿ ಕೇಳಿ ಬರುತ್ತಿದೆ. ದೊಡ್ಡ ಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆದಿದೆ. ಅಷ್ಟು ಸುಲಭವಾಗಿ ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದೆ ಅಂದರೆ ಸರ್ಕಾರಿ ಅಭಿಯೋಜಕರು ಯಾವ ರೀತಿ ವಾದ ಮಾಡಿದರು ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ