Breaking News

ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ

Spread the love

ಬೆಂಗಳೂರು:  ಅತಿವೃಷ್ಟಿಯಿಂದಾಗಿ ಇಡೀ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಆದ್ರೆ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾದ ವಿರುದ್ಧ ಕಿಡಿಕಾರಿದ್ದಾರೆ.

ಕಳೆದ ವರ್ಷ ಅತಿವೃಷ್ಟಿ ಪರಿಹಾರದಲ್ಲಿ ಆದ ವೈಫಲ್ಯದಿಂದ ಈ ಬಾರಿ ಜನರ ಕಷ್ಟ ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ. ಅತಿವೃಷ್ಟಿಯಿಂದ ಕಂಗೆಟ್ಟ ಜನರಿಗೆ ಪರಿಹಾರ ಕೊಡುವ ಕೆಲಸ ಮಾಡುವ ಬದಲು ಕಂದಾಯ ಸಚಿವರು ಬೆಂಗಳೂರಿನಲ್ಲಿ ಕುಳಿತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ.  ಅವರಿಗೆ ಬೆಂಗಳೂರಿನಲ್ಲಿ ಏನು ಕೆಲಸ ಎಂದು ಕಿಡಿಕಾರಿದ್ದು, ಮುಖ್ಯಮಂತ್ರಿಗಳು ಮೊದಲು ಕಂದಾಯ ಸಚಿವರನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ಕಳುಹಿಸಿಕೊಡಿ ಎಂದು ಟ್ವೀಟ್ ಮಾಡಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬದಾಮಿ ಕ್ಷೇತ್ರದ ಜನರಲ್ಲಿ ಕ್ಷಮೆ ಕೋರಿದ ಸಿದ್ದು:

ಕೊರೊನಾ  ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ,ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ