Breaking News

ಮಚ್ಛೆಯಲ್ಲಿ ರೈತರ ಮೇಲೆ ಪೊಲೀಸರ ದಬ್ಬಾಳಿಕೆ: ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಲಿ: ಸಚಿನ್ ಮೀಗಾ

Spread the love

ಬೆಳಗಾವಿಯಲ್ಲಿ ರೈತರ ಮೇಲೆ ದೌರ್ಜನ್ಯ ಇಷ್ಟೇಲ್ಲಾ ಆಗುತ್ತಿದ್ದರೂ ಕೂಡ ಗೃಹ ಸಚಿವರು ಎಲ್ಲಿ ಕಳೆದು ಹೋಗಿದ್ದಾರೋ ಗೊತ್ತಿಲ್ಲ. ಕೂಡಲೇ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅದೇ ರೀತಿ ರೈತರ ಮೇಲೆ ದೌರ್ಜನ್ಯ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು 24 ಗಂಟೆಯಲ್ಲಿ ಅಮಾನತ್ತು ಮಾಡಬೇಕು ಎಂದು ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಆಗ್ರಹಿಸಿದರು.

ಬೆಳಗಾವಿಯ ಹಲಗಾ-ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರ ದೌರ್ಜನ್ಯಕ್ಕೆ ಎಲ್ಲಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿನ್ ಮೀಗಾ ನಿರಂತರವಾಗಿ ರೈತರ ಮೇಲೆ ದೌರ್ಜನ್ಯ ಮಾಡುತ್ತಿರುವ ಸರ್ಕಾರವನ್ನು ನಾವು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಬೆಳಗಾವಿಯಲ್ಲಿ ಖಾಕಿ ಪಡೆ ಇಟ್ಟುಕೊಂಡು ರೈತರ ಮೇಲೆ ದೌರ್ಜನ್ಯ ನಡೆಸಿರುವುದನ್ನು ಕರ್ನಾಟಕ ಕಿಸಾನ್ ಘಟಕ ಖಡಾಖಂಡಿತವಾಗಿ ಖಂಡಿಸುತ್ತದೆ. ರೈತರ ಮೇಲೆ ದೌರ್ಜನ್ಯ ಮಾಡುವುದೇ ಇವರ ಕಾರ್ಯಕ್ರಮ ಆಗಿಬಿಟ್ಟಿದೆ. 2018ರಲ್ಲಿ ಮಧ್ಯಪ್ರದೇಶದಲ್ಲಿ ಆರು ಜನ ರೈತರನ್ನು ಗೋಲಿಬಾರ್ ಮಾಡಿ ಕೊಂದಿರುವುದು ಇದೇ ಬಿಜೆಪಿ ಸರ್ಕಾರ. ಇನ್ನು ಕರ್ನಾಟಕದ ಹಾವೇರಿಯಲ್ಲಿ ಇಬ್ಬರು ರೈತರನ್ನು ಗೋಲಿಬಾರ್ ಮಾಡಿ ಕೊಂದಿರುವುದು ಕೂಡ ಇದೇ ಬಿಜೆಪಿ ಸರ್ಕಾರ. ಇದೀಗ ಬೆಳಗಾವಿಯಲ್ಲಿ ಮತ್ತೆ ಇಂತಹ ಸನ್ನಿವೇಶ ಸೃಷ್ಟಿಯಾಗಿದೆ. ಖಾಕಿ ಪಡೆ ಹಿಡಿದುಕೊಂಡು ರೈತರ ಮೇಲೆ ಗದಾಪ್ರಹಾರ ಮಾಡಿರುವುದನ್ನು ನಾವು ನೋಡುತ್ತಿದ್ದೇವೆ. ತಕ್ಷಣವೇ ಈ ಘಟನೆಯ ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು. ಅದೇ ರೀತಿ ರೈತರ ಮೇಲೆ ದೌರ್ಜನ್ಯ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು 24 ಗಂಟೆಯಲ್ಲಿ ಅಮಾನತ್ತು ಮಾಡಬೇಕು. ಇಲ್ಲದಿದ್ರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಒಟ್ಟಿನಲ್ಲಿ ಬೆಳಗಾವಿಯ ಮಚ್ಛೆಯಲ್ಲಿ ರೈತರ ಮೇಲೆ ಪೊಲೀಸರ ಗೂಂಡಾವರ್ತನೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ನ್ಯಾಯಕ್ಕಾಗಿ ರೈತರು ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೀಡಿದ್ದು. ಇದಕ್ಕೆ ಕಾಂಗ್ರೆಸ್ ಕಿಸಾನ್ ಘಟಕ ಕೂಡ ಬೆಂಬಲ ಸೂಚಿಸಿದೆ.


Spread the love

About Laxminews 24x7

Check Also

ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ

Spread the loveಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್​ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ