Breaking News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು  ಘೋಷಣೆ ಕೂಗಿ ಆಕ್ರೋಶ

Spread the love

ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು  ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ವಾತಂತ್ರ್ಯ ಹೋರಾಟಗಾರನ ತವರು ಜಿಲ್ಲೆಯಲ್ಲಿಯೇ ಪ್ರತಿಮೆ ಸ್ಥಾಪನೆಗೆ ಅಡಚನೆಯಾದುದ್ದರಿಂದ  ರಾಜ್ಯ ಮಟ್ಟದಲ್ಲಿ ಪ್ರತಿಭಟನೆಗಳು  ನಡೆಯುತ್ತಿವೆ. 


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ