Breaking News

ಜಗದೀಶ್ ಶೆಟ್ಟರ್ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಶೆಟ್ಟರ್ ದೆಹಲಿ ಪ್ರಯಾಣ ಕುತೂಹಲಕ್ಕೆ ಕಾರಣ

Spread the love

ಬೆಂಗಳೂರು: ಮಾಜಿ ಸಿಎಂ, ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ನಡುವೆ ಶೆಟ್ಟರ್ ದೆಹಲಿ ಪ್ರಯಾಣ ಕುತೂಹಲಕ್ಕೆ ಕಾರಣವಾಗಿದೆ.

ಏಕಾಏಕಿ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಕುರಿತು ತೀವ್ರ ಚರ್ಚೆ ನಡೆದಿರುವ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಹೈಕಮಾಂಡ್ ಶೆಟ್ಟರ್ ಗೆ ಬುಲಾವ್ ನೀಡಿದೆ ಎನ್ನಲಾಗುತ್ತಿದೆ.

ಅಲ್ಲದೇ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಫೈನಲ್ ಮಾಡುವ ನಿಟ್ಟಿನಲ್ಲಿ ಚರ್ಚಿಸಲು ಶೆಟ್ಟರ್ ಅವರನ್ನು ಆಹ್ವಾನಿಸಲಾಗಿದೆ ಎಂದು ಕೂಡ ಹೇಳಲಾಗುತ್ತಿದೆ.

ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ  ಚರ್ಚೆ  ರಾಜ್ಯ ರಾಜಕೀಯದಲ್ಲಿ ಆರಂಭವಾಗಿರುವ ಬೆನ್ನಲ್ಲೇ ಇದೀಗ ಜಗದೀಶ್ ಶೆಟ್ಟರ್ ದಿಢೀರ್ ಆಗಿ ದೆಹಲಿ ಪ್ರವಾಸ ಕೈಗೊಂಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ