Breaking News

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Spread the love

ದೆಹಲಿ: ಇಂದು (ನವೆಂಬರ್ 13, ಶನಿವಾರ) ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ ಒಂಬತ್ತನೇ ದಿನವೂ ಇಂಧನ ದರ (Fuel Price) ಸ್ಥಿರವಾಗಿದೆ. ನವೆಂಬರ್ 3ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು. ಆ ಬಳಿಕ ಹಲವೆಡೆ ಇಂಧನ ದರದಲ್ಲಿ ಕೊಂಚ ಇಳಿಕೆ ಆಗಿತ್ತು. ನಿರಂತರ ಏರಿಕೆ ಕಾಣುತ್ತಿದ್ದ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ನೋಡಿ ವಾಹನ ಸವಾರರು ಆಕ್ರೋಶ ಹೊರಹಾಕಿದ್ದರು. ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ