Breaking News

ಪ್ರಯಾಣಿಕರೇ ಎಚ್ಚರ…ಇನ್ಮುಂದೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಜೋರಾಗಿ ಶಬ್ದ ಮಾಡುವಂತಿಲ್ಲ..!

Spread the love

ಬೆಂಗಳೂರು: ಸರ್ಕಾರಿ ಬಸ್ ಪ್ರಯಾಣದ ವೇಳೆ ಜೋರಾಗಿ ಶಬ್ದ ಮಾಡುವುದನ್ನು ನಿಷೇಧಿಸಿ ಕೆಎಸ್ಆರ್​ಟಿಸಿ ಎಂ.ಡಿ ಶಿವಯೋಗಿ ಕಳಸದ್​ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಬಸ್​ನಲ್ಲಿ ಪ್ರಯಾಣಿಸುವಾಗ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದ್ರೂ ಕೂಡ ಮೊದಲು ಬಸ್ ನಿರ್ವಾಹಕ ಪ್ರಯಾಣಿಕರಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಆ ಪ್ರಯಾಣಿಕನನ್ನು ಅಲ್ಲೇ ಇಳಿಸಿ, ಮುಂದುವರೆಯಬೇಕು. ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು.

ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94 (1)ವಿ ಪ್ರಕಾರ, ಬಸ್ ಪ್ರಯಾಣದ ವೇಳೆ ಜೋರಾಗಿ ಶಬ್ದ ಮಾಡುವುದು ಕಾನೂನುಬಾಹಿರ. ಬಸ್​ಗಳಲ್ಲಿ ಜೋರಾದ ಶಬ್ದ ಉಂಟುಮಾಡುವ ಮೊಬೈಲ್ ಬಳಸುವುದರಿಂದ ಶಬ್ದ ಮಾಲಿನ್ಯ ಉಂಟಾಗುವುದರ ಜೊತೆಗೆ ಪ್ರಯಾಣಿಕರಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ, ಇನ್ಮುಂದೆ ಬಸ್​ಗಳಲ್ಲಿ ಪ್ರಯಾಣಿಸುವಾಗ ಜೋರಾಗಿ ಹಾಡು ಹಾಕುವುದಕ್ಕೆ ನಿರ್ಬಂಧ ವಿಧಿಸಿ ಆದೇಶಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ