ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಲಾಬಿ ಜೋರಾಗಿದೆ.
ಸಹೋದರ ಲಖನ್ ಜಾರಕಿಹೊಳಿಗೆ ಪರಿಷತ್ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಇದೀಗ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಸಿಎಂ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ.
ಮೊನ್ನೆ ದೆಹಲಿಯ ಕರ್ನಾಟಕ ಭವನದಲ್ಲಿ ಕೂಡ ರಮೇಶ್, ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.
Laxmi News 24×7