Breaking News

ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣ 13 ಜನರ ವಿರುದ್ಧ ಚಾರ್ಜ್ ಶೀಟ್

Spread the love

ಬೆಳಗಾವಿ: ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 13 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಸಿಐಡಿ ಡಿವೈಎಸ್​​​ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ಸುದೀರ್ಘ ತನಿಖೆ ನಡೆಸಿದ್ದು, ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಆನಂದ ಅಪ್ಪುಗೋಳ  ಸೇರಿ ಆಡಳಿತ ಮಂಡಳಿಯ 13 ಜನ ನಿರ್ದೇಶಕರು ಗ್ರಾಹಕರ ಠೇವಣಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಮುಂಬೈ ಕರ್ನಾಟಕದ ಕೂಲಿ ಕಾರ್ಮಿಕರಿಂದ ಹಿಡಿದು ಶ್ರೀಮಂತರು ಹಾಗೂ ಅಧಿಕಾರಿಗಳಿಂದ ಹಣ ದ್ವಿಗುಣಗೊಳಿಸುವ ಆಮೀಷವೊಡ್ಡಿ 275 ಕೋಟಿ ಸ್ಥಿರ ಠೇವಣಿ ಪಡೆಯಲಾಗಿತ್ತು. ಈ ಹಣವನ್ನು ಆನಂದ ಅಪ್ಪುಗೋಳ ಸೇರಿ 13 ಜನರು 275 ಕೋಟಿ ಠೇವಣಿ ಹಣ ವಂಚನೆ ಮಾಡಿ, ಎಲ್ಲ ಹಣವನ್ನು ಸ್ವಂತಕ್ಕೆ ಬಳಸಿ ಗ್ರಾಹಕರಿಗೆ ವಂಚಿಸಿದ್ದರು ಎಂಬ ಆರೋಪವಿದೆ.

ಈ ಕುರಿತು ಸಿಐಡಿಯಿಂದ ಮೊದಲ ಹಂತದ ತನಿಖೆ ಪೂರ್ಣಗೊಂಡಿದ್ದು, ನ್ಯಾಯಾಲಯಕ್ಕೆ  2,063 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ