Breaking News

ಸೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಟಿಕೆಟ್ ಗೆ ಬೇಡಿಕೆ ಇಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರಿಗೆ ಬಿಜೆಪಿಯಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಲ್ಲಿ ಬಿಜೆಪಿ 2 ಸ್ಥಾನಗಳಲ್ಲಿಯೂ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಘೋಷಿಸಿ ಬಿಜೆಪಿಯಿಂದ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು ಎಂದು ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ. 2019 ರಲ್ಲಿ ನಡೆದ ಗೋಕಾಕ್ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಅವರು ನಂತರ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದು, ಪಕ್ಷದಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.

ಬೆಳಗಾವಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಮೊದಲನೇ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಸ್ಪರ್ಧಿಸುವುದು ಖಚಿತವಾಗಿದೆ. ಎರಡನೇ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ಬಾಲಚಂದ್ರ ಜಾರಕಿಹೊಳಿ ಅವರು ಸಭೆಯಲ್ಲಿ ಮಾತನಾಡಿ, ಎರಡನೇ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಪಕ್ಷದ ನಾಯಕರು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

Spread the loveಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ