Breaking News

ಮಹಿಳೆಗೆ ಬ್ಲ್ಯಾಕ್​ಮೇಲ್​! 50 ಸಾವಿರಕ್ಕೆ ಬೇಡಿಕೆ ಇಟ್ಟು, 15 ಸಾವಿರ ಹಣ ಪಡೆದ ಆರೋಪ

Spread the love

ಚಿತ್ರದುರ್ಗ: ನ್ಯಾಯಬೆಲೆ ಅಂಗಡಿ ನಡೆಸುತ್ತಿರುವ ಮಹಿಳೆಯೊಬ್ಬರಿಗೆ ಬ್ಲ್ಯಾಕ್​ಮೇಲ್​ ಮಾಡಿರುವ ಆರೋಪ ಕೇಳಿಬಂದಿದೆ. ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯ ನ್ಯಾಯಬೆಲೆ ಅಂಗಡಿ ಮಹಿಳೆ ರಂಗಮ್ಮಗೆ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಮಹಿಳೆ ಗ್ರಾಹಕರಿಂದ ತಲಾ 10 ರೂಪಾಯಿ ಪಡೆದ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

10 ರೂಪಾಯಿ ಪಡೆದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ ಆರೋಪಿ 50 ಸಾವಿರಕ್ಕೆ ಬೇಡಿಕೆ ಇಟ್ಟು, 15,000 ರೂ. ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವಿನಾಶ್ ಮತ್ತು ಪ್ರದೀಪ್ ವಿರುದ್ಧ ರಂಗಮ್ಮ ಗಂಭೀರ ಆರೋಪ ಮಾಡಿದ್ದಾರೆ. ಭೀಮ್ ಆರ್ಮಿ ಹೆಸರಿನಲ್ಲಿ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ ಕೇಳಿಬಂದಿದ್ದು, ಚಿತ್ರದುರ್ಗ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ