Breaking News

ಮಹದೇಶ್ವರ ಬೆಟ್ಟ ಅಭಯಾರಣ್ಯದಲ್ಲಿ 5 ಅಡಿ ಎತ್ತರದ ಯೇಸು ಕ್ರಿಸ್ತನ ಪ್ರತಿಮೆ ಸ್ಥಾಪನೆ: ಹಲವರ ವಿರೋಧ

Spread the love

ಹುಬ್ಬಳ್ಳಿ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಐದು ಅಡಿ ಎತ್ತರದ ಏಸುಕ್ರಿಸ್ತನ ಪ್ರತಿಮೆ ಸ್ಥಾಪನೆಗೊಂಡಿದ್ದು, ಇದಕ್ಕೆ ವನ್ಯಜೀವಿ ಕಾರ್ಯಕರ್ತರು ಮತ್ತು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಪ್ರದೇಶವು ಜಲ್ಲಿಪಾಳ್ಯ ಗ್ರಾಮದ ಸಮೀಪದಲ್ಲಿರುವ ಹೂಗ್ಯ ಎಂಬ ಪ್ರದೇಶದ ಅರಣ್ಯ ಭೂಮಿಯಲ್ಲಿ ಈ ಪ್ರತಿಮೆ ಸ್ಥಾಪನೆಗೊಂಡಿದೆ. ರಾಜ್ಯದಲ್ಲಿ ಎರಡನೇ ಲಾಕ್‌ಡೌನ್ ಸಮಯದಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಕೆಲ ಸ್ಥಳೀಯರು ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿಯಾಗಿರುವ ಜಾಗ ತೆರವುಗೊಳಿಸದಂತೆ ಮಾಡಲು ಇಲ್ಲಿ ಧಾರ್ಮಿಕ ಸಂಘರ್ಷವನ್ನು ಸೃಷ್ಟಿಸಲು ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ಎಂದು ವನ್ಯಜೀವಿ ಕಾರ್ಯಕರ್ತರು ಆರೋಪಿಸಿದ್ದಾರೆ.

‘ಅರಣ್ಯ ಭೂಮಿ ಒತ್ತುವರಿಯಾಗಿರುವುದು ಇಲ್ಲಿ ಸ್ಪಷ್ಟವಾಗಿದೆ. ಇದಕ್ಕ ಅಧಇಕಾರಿಗಳು ಅವಕಾಶ ನೀಡಿದರೆ ಇಲ್ಲೊಂದು ಚರ್ಚ್ ಹಾಗೂ ಪ್ರವಾಸಿ ತಾಣ ನಿರ್ಮಾಣಗೊಳ್ಳಲಿದೆ. ಈ ಪ್ರದೇಶವು ಮಲ್ಲೇ ಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ಭಾಗವಾಗಿದ್ದು, ಅಂತಹ ಯಾವುದೇ ಅರಣ್ಯೇತರ ಚಟುವಟಿಕೆಗಳಿಗೆ ಅರಣ್ಯ ಇಲಾಖೆ ಅಧಿಕಾರಿ ಅವಕಾಶ ನೀಡಬಾರದು ಎಂದು ಕೊಳ್ಳೇಗಾಲದ ವನ್ಯಜೀವಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

‘ಕಳೆದ ವರ್ಷವೇ ಚಿಕ್ಕ ದೇಗುಲ ನಿರ್ಮಿಸುವ ಪ್ರಯತ್ನ ನಡೆದಿತ್ತು. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯಪ್ರವೇಶಿಸಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈ ವರ್ಷ, ಸಾಂಕ್ರಾಮಿಕ ರೋಗ ಸಮಯದಲ್ಲಿ, ಕಾಮಗಾರಿಯನ್ನು ಮತ್ತೊಮ್ಮೆ ಕೈಗೆತ್ತಿಕೊಂಡು ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಪ್ರತಿಮೆಯನ್ನು ಶೀಘ್ರಾತಿ ಶೀಘ್ರದಲ್ಲಿ ಸ್ಥಳಾಂತರಗೊಳಿಸುವಂತೆ ಒತ್ತಾಯಿಸುತ್ತಿದ್ದೇವೆ ಎಂದು ತಿಳಿದ್ದಾರೆ.

ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವವರು ಅದನ್ನು ಸಾಗುವಳಿ ಮಾಡಲು ಯತ್ನಿಸಿ ಜಮೀನು ತಮಗೇ ಸೇರಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆಂದು ಎಂದು ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಅರಣ್ಯ ಇಲಾಖೆಯ ಒಪ್ಪಿಗೆ ಇಲ್ಲದೇ ಅಕ್ರಮವಾಗಿ ರಸ್ತೆ ನಿರ್ಮಿಸಲಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.

ಇದು ಅತಿಕ್ರಮಣದ ಸ್ಪಷ್ಟ ಪ್ರಕರಣವಾಗಿದ್ದು, ಅರಣ್ಯ ಇಲಾಖೆ ಶೀಘ್ರಗತಿಯಲ್ಲಿ ಕ್ರಮ ಕೈಗೊಳ್ಳಬೇಕು. ಅತಿಕ್ರಮಣದಾರರು ಭಾರೀ ಯಂತ್ರೋಪಕರಣಗಳನ್ನು ಬಳಸಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಧಾರ್ಮಿಕ ಹಸ್ತಕ್ಷೇಪದಿಂದಾಗಿ ಕರ್ನಾಟಕದಲ್ಲಿ ಹಲವಾರು ಅರಣ್ಯ ಪ್ರದೇಶಗಳು ನಾಶವಾಗಿವೆ. ಮಲ್ಲೆ ಮಹದೇಶ್ವರ ಬೆಟ್ಟ ಪ್ರದೇಶವನ್ನು ಕರ್ನಾಟಕದ ಆರನೇ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ತಡವಾಗುವ ಮುನ್ನ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು,” ಎಂದು ಮತ್ತೊಬ್ಬ ಕಾರ್ಯಕರ್ತ ಆಗ್ರಹಿಸಿದ್ದಾರೆ.

ಈ ನಡುವೆ ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಕಾಮಗಾರಿಯನ್ನು ಈ ಹಿಂದೆಯೇ ನಿಲ್ಲಿಸಲಾಗಿತ್ತು. ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದ್ದೇ ಆದಲ್ಲಿ ಕ್ರಮ ಕೈಗೊಳ್ಳುವುದು ಎಂದು ತಿಳಿಸಿದ್ದಾರೆ.

ಪ್ರತಿಮೆ ಸ್ಥಾಪನೆ ಬಗ್ಗೆ ಮಾಹಿತಿಗಳು ತಿಳಿದುಬಂದಿದೆ. ಅರಣ್ಯ ಪ್ರದೇಶದ ಬಳಿ ಪ್ರತಿಮೆ ಇದೆ ಎಂದು ಸ್ಥಳೀಯರು ವಿವರಿಸಿದ್ದಾರೆ. ಅಂತಹ ಯಾವುದೇ ಅತಿಕ್ರಮಣ ನಡೆಯದಂತೆ ನೋಡಿಕೊಳ್ಳಲು ನಿಯಮಿತವಾಗಿ ಗಸ್ತು ತಿರುಗಲು ಅರಣ್ಯ ತಂಡವನ್ನು ನಿಯೋಜಿಸಲಾಗುವುದು ಎಂದು ಮಲ್ಲೆ ಮಹದೇಶ್ವರ ಬೆಟ್ಟ ಅಭಯಾರಣ್ಯದ ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ