Breaking News

ಅಮಾಯಕ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

Spread the love

ಚಿತ್ರದುರ್ಗ: ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಅಮಾನವೀಯ ಘಟನೆ ಚಿತ್ರದುರ್ಗದಲ್ಲಿ  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಚೋಳಗುಡ್ಡ ನಿವಾಸಿ ಜಯಸೂರ್ಯ, ಹೊಳಲ್ಕೆರೆ ತಾಲ್ಲೂಕಿನ ಎಚ್.ಡಿ ಪುರ ನಿವಾಸಿ ಮಾರುತಿ, ಶರತ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.  ಚಿತ್ರದುರ್ಗ ತಾಲೂಕಿನ ಅಡವಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೇರೊಂದು ಪ್ರಕರಣಕ್ಕೆ ತಳುಕು ಹಾಕಿ ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಹಲ್ಲೆಗೊಳಗಾದವರ ವಿರುದ್ಧವೇ ಹಲ್ಲೆಕೋರರು ದೂರು ದಾಖಲಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಸುಪಾರಿ ಹಂತಕರೆಂದು ದೂರು ನೀಡಿದ್ದಾರೆ.

ರಾತ್ರಿ ವೇಳೆ ಅಮಾಯಕ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಈ ಮೂವರು ಯುವಕರು ಗಾರೆ ಕೆಲಸ ಮಾಡಿಕೊಂಡಿದ್ದರು. ಈ ಸಂಬಂಧ ಪೂರ್ವಪರ ವಿಚಾರಿಸದೆ ಅಮಾಯಕರ ವಿರುದ್ಧ ಭರಮಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ