ಚಾಲಕನ ನಿಯಂತ್ರಣ ತಪ್ಪಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಆಜಂ ನಗರದ ಎಪಿಎಂಸಿ ರೋಡ್ ಕಾರ್ನರನಲ್ಲಿ ಬೆಳಿಗ್ಗೆ 9.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಬಿದ್ದಿದ್ದ ಕಬ್ಬನ್ನು ಬ್ಯಾರೆ ಟ್ರಾಲಿಗೆ ಹಾಕಲಾಗುತ್ತಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ