Breaking News

ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ: ತೀವ್ರವಾಗಿ ಗಾಯಗೊಂಡ ಪಾದಚಾರಿ

Spread the love

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಚಿಗರಿ ಬಸವೊಂದು ಡಿಕ್ಕಿ ಹೊಡೆದು ಪಾದಚಾರಿಗೆ ಗಂಭೀರ ಗಾಯವಾಗಿರುವ ಘಟನೆ ಧಾರವಾಡದ ಕೋರ್ಟ್ ವೃತದ ಬಳಿ ನಡೆದಿದೆ.

ಬಾಗಲಕೋಟೆ ಮೂಲದ ಮಲ್ಲಣ್ಣ ಮೇಟಿ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನೂ ಪದಾಚಾರಿ ಮಲ್ಲಣ್ಣ ಧಾರವಾಡ ಕೋರ್ಟ್ ವೃತದ ಬಳಿಯ ಸಾರ್ವಜನಿಕ ಸಂಚಾರ ನಡೆಸುವ ರಸ್ತೆ ಕ್ರಾಸ್ ಮಾಡಿದ್ದಾರೆ. ಬಳಿಕ ಮುಂದೆ ಇದ್ದ ಬಿಆರ್‌ಟಿಎಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಲ್ಲಣ್ಣನಿಗೆ ಹಿಂಬದಿಯಿಂದ ಬಂದ್ ಚಿಗರಿ ಬಸ್ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಬಸ್ ಡಿಕ್ಕಿಯಿಂದಾಗಿ ಪದಚಾರಿ ಸ್ಥಳದಲ್ಲಿಯೇ ಕುಸಿದು ಬಿದಿದ್ದಾರೆ.

ಪದಚಾರಿಗಿ ಗಂಭೀರವಾದ ಗಾಯವಾಗಿದ್ದು, ಅಪಘಾತ ನಡೆಯುತ್ತಿದಂತೆ ಸ್ಥಳೀಯರು ಹಾಗೂ ವಾಹನ ಸವಾರರು ಪದಚಾರಿ ಮಲ್ಲಣ್ಣ ರಕ್ಷಣೆ ಮುಂದಾಗಿದ್ದಾರೆ. ಸ್ಥಳೀಯ ವಾಹನ ಸಹಾಯ ಪಡೆದುಕೊಂಡು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸಾರ್ವಜನಿಕರ ಮಾಹಿತಿ‌ ಮೇರೆಗೆ ಸ್ಥಳಕ್ಕೆ ಆಗಮಿಸಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ಕೈಗೊಂಡಿದ್ದು, ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ