ಇಪಿಎಸ್ ಪಿಂಚಣಿದಾರರಿಗೆ ಮೂರು ಸಾವಿರ ರೂಪಾಯಿ ಪಿಂಚಣಿ ನೀಡಬೇಕು. ಡಿಎ ಸೌಲಭ್ಯ ಒಳಗೊಂಡಂತೆ ಭಗತ್‍ಸಿಂಗ್ ಕೋಶಾರಿ ವರದಿ, ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪಿಚಂಣಿದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದ ಇಪಿಎಸ್ ಪಿಂಚಣಿದಾರರ ಸಂಘದ ಸದಸ್ಯರು ನಮಗೆ ಕನಿಷ್ಟ ಮೂರು ಸಾವಿರ ರೂಪಾಯಿ ಪಿಂಚಣಿ ನೀಡಬೇಕು. ಬಿಪಿಎಲ್ ಫಲಾನುಭವಿಗಳಿಗೆ ಇರುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿ ಇಪಿಎಸ್ ಪಿಂಚಣಿದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಇಪಿಎಸ್ ಪಿಂಚಣಿದಾರರ ಸಂಘದ ರಾಜ್ಯಾಧ್ಯಕ್ಷರಾದ ರಾಜಶೇಖರ್ ಕೋಪರ್ಡಿ ದೇಶದಲ್ಲಿ ಭಗತ್‍ಸಿಂಗ್ ಕೋಶಾರಿ ವರದಿ ಜಾರಿಯಾಗಬೇಕೆಂದು ಒತ್ತಾಯಿಸಿದರು. ಪಿಂಚಣಿದಾರರಿಗೆ ಬಿಪಿಎಲ್ ಫಲಾನುಭವಿಗಳಂತೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ಇಎಸ್‍ಐ ದಂಥ ಆರೋಗ್ಯ ಸೌಲಭ್ಯಗಳೊಂದಿಗೆ ಡಿಎ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಇಪಿಎಸ್ ಪಿಂಚಣಿದಾರರ ಸಂಘದ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.