Breaking News

ಲಖನ್‌ ಸದ್ಯ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ನಮ್ಮೊಂದಿಗೆ ಇಲ್ಲ. ಯಾರ‍್ಯಾರು ಸ್ಪರ್ಧಿಸುತ್ತಾರೆ ನ.23ರ ನಂತರ ಸ್ಪಷ್ಟ : ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ‘ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿಸಲು ವರಿಷ್ಠರು ಹಾಗೂ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದೇವೆ.

ಅಧಿಕೃತವಾಗಿ ಪ್ರಕಟವಾದ ನಂತರ, ನ.22ರಂದು ಅವರು ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಜಿಲ್ಲೆಯ ಯಮಕನಮರಡಿಯ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಬುಧವಾರ ನಡೆದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಒಂದು ಸ್ಥಾನಕ್ಕಾಗಿ ಮಾತ್ರ ಸ್ಪರ್ಧಿಸಲು ಪಕ್ಷ ತೀರ್ಮಾನಿಸಿದೆ. ಗೆಲ್ಲುವ ಅವಕಾಶವೂ ಇದೆ’ ಎಂದರು.

‘ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕೂವರೆ ಸಾವಿರಕ್ಕಿಂತ ಹೆಚ್ಚು ಮತಗಳನ್ನು ಪಡೆದರೂ ಕಾಂಗ್ರೆಸ್ ಅಭ್ಯರ್ಥಿ ಸೋಲಬೇಕಾಯಿತು. ಮತಗಳ ವಿಭಜನೆ ಆಗ ಕಾರಣವಾಯಿತು. ಹೀಗಾಗಿ, ಈ ಬಾರಿ ಒಬ್ಬರೇ ಅಭ್ಯರ್ಥಿ ಕಣಕ್ಕಿಳಿಸುತ್ತಿದ್ದೇವೆ. 3 ಸಾವಿರಕ್ಕಿಂತ ಹೆಚ್ಚು ಮತಗಳನ್ನು (‍ಪ್ರಥಮ ಪ್ರಾಶಸ್ತ್ಯ) ಪಡೆದರೆ ನಾವು ಜಯ ಗಳಿಸಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚನ್ನರಾಜ, ಕೆಪಿಸಿಸಿ ವಕ್ತಾರೆಯೂ ಆಗಿರುವ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಹೋದರ.

ಮತ ವಿಭಜನೆ: ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಮಾತನಾಡಿದ್ದ ಸತೀಶ, ‘ಈ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಮತ ವಿಭಜನೆ ಆಗುವ ಸಾಧ್ಯತೆ ಇದೆ’ ಎಂದರು.

‘ಲಖನ್‌ ಸದ್ಯ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ಅವರು ನಮ್ಮೊಂದಿಗೆ ಇಲ್ಲ. ಯಾರ‍್ಯಾರು ಸ್ಪರ್ಧಿಸುತ್ತಾರೆ ಎನ್ನುವುದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನ.23ರ ನಂತರ ಸ್ಪಷ್ಟವಾಗಲಿದೆ’ ಎಂದು ಪ್ರತಿಕ್ರಿಯಿಸಿದರು.

 


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ