ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕನಿಷ್ಠ ಬೆಂಬಲ ಬೆಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ, ಸಚಿವರಾದ ಡಾ: ಕೆ.ಸುಧಾಕರ್, ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.