Breaking News

ಶಿಶುಪಾಲನಾ ರಜೆ: ಮನಸ್ಸಿಗೆ ಬಂದಂತೆ ಪಡೆಯುವಂತಿಲ್ಲ; ಇಲ್ಲಿದೆ ಸ್ಪಷ್ಟೀಕರಣ

Spread the love

ಬೆಂಗಳೂರು – ರಾಜ್ಯ ಸರಕಾರಿ ಮಹಿಳಾ ನೌಕರರಿಗಾಗಿ ಸರಕಾರ ಈ ವರ್ಷದಿಂದ ಜಾರಿಗೊಳಿಸಿರುವ ಶಿಶುಪಾಲನಾ ರಜೆ ಕುರಿತು ಉಂಟಾಗಿದ್ದ ಹಲವು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಸರಕಾರ ಮಾಡಿದೆ.

ವಿಶೇಷವಾಗಿ ಪ್ರಾಥಮಿಕ ಶಾಲೆಗಳಲ್ಲಿ ಈ ರಜೆಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಕೆಲವರು ಸ್ಪಷ್ಟೀಕರಣ ಕೋರಿ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಸರಕಾರ ಸುತ್ತೋಲೆ ಹೊರಡಿಸಿದೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಶಿಶುಪಾಲನಾ ರಜೆ ಅನ್ವಯವಾಗಲಿದೆ. ಆದರೆ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ರಜೆ ಪಡೆಯಬೇಕು ಎಂದು ತಿಳಿಸಲಾಗಿದೆ. ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದೇ ರಜೆ ಪಡೆಯಬೇಕು.

ಒಮ್ಮೆಲೇ ಒಂದಕ್ಕಿಂತ ಹೆಚ್ಚಿನ ಶಿಕ್ಷಕರು ರಜೆ ಕೋರಿದಲ್ಲಿ ಅತ್ಯಂತ ಕಿರಿಯ ಮಗುವನ್ನು ಹೊಂದಿರುವವರಿಗೆ ಆದ್ಯತೆಯ ಮೇರೆಗೆ ರಜೆ ನೀಡಬೇಕು ಎಂದು ತಿಳಿಸಲಾಗಿದೆ. ಒಮ್ಮೆ ಕನಿಷ್ಠ 15 ದಿನ ಗರಿಷ್ಠ 30 ದಿನ ಮಾತ್ರ ರಜೆ ತೆಗೆದುಕೊಳ್ಳಬಹುದು.

ಈ ಸಂಬಂಧ ಅನೇಕ ಗೊಂದಲಗಳಿಗೆ ಸ್ಪಷ್ಟೀಕರಣ ನೀಡುವ ಸುತ್ತೋ


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ