Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ: ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ: ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

Spread the love

ಬೆಳಗಾವಿ: ಬೆಳಗಾವಿ ಸ್ಥಳೀಯ ಸಂಸ್ಥೆಗಳ ಉಭಯ ಸದಸ್ಯ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವುದು ಬಹುತೇಕ ಖಚಿತವಾಗಿದೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಸಹೋದರ ಚೆನ್ನರಾಜ್‌ ಹಟ್ಟಿಹೊಳಿ ಅವರನ್ನು ರಾಜ್ಯ ಕಾಂಗ್ರೆಸ್‌ ನಾಯಕತ್ವ ಅಭ್ಯರ್ಥಿಯಾಗಿ ಅನಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಜಾರಕಿಹೊಳಿ ಸಹೋದರರಾದ ರಮೇಶ್‌ ಮತ್ತು ಬಾಲಚಂದ್ರ ಅವರು ತಮ್ಮ ಕಿರಿಯ ಸಹೋದರ ಲಖನ್‌ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

 

ಮೂಲಗಳ ಪ್ರಕಾರ, ಬಿಜೆಪಿ ನಾಯಕತ್ವವು ಕೇವಲ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು ಮತ್ತು ಲಖನ್ ಅವರಿಗೆ ಅವಕಾಶ ಸಿಗದಿರಬಹುದು ಎಂದು ಸೂಚಿಸಿದ ನಂತರವೇ ಲಖನ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜಾರಕಿಹೊಳಿ ಸೋದರರು ನಿರ್ಧರಿಸಿದ್ದಾರೆ. ಲಖನ್ ಅವರು ಇದೇ ನವೆಂಬರ್ 23 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಕಣಕ್ಕೆ ಸಿದ್ಧರಾಗಲು ರಮೇಶ್, ಬಾಲಚಂದ್ರ ಮತ್ತು ಲಖನ್ ನಿನ್ನೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾರಕಿಹೊಳಿಯವರ ಆಪ್ತ ಮೂಲಗಳು ಹೇಳುವ ಪ್ರಕಾರ, ಲಖನ್ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಮತಗಳ ಪ್ರಮುಖ ಭಾಗವನ್ನು ಪಡೆಯುವತ್ತ ಗಮನಹರಿಸಿದ್ದಾರೆ. ‘ಲಖನ್ ಅವರ ಹಿಂದೆ ಒಟ್ಟುಗೂಡಿಸಲು ಅವರು ಈಗಾಗಲೇ ವಿವಿಧ ಸ್ಥಳೀಯ ಸಂಸ್ಥೆಗಳ ಸದಸ್ಯರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಹಲವಾರು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಸಹ ಸಹೋದರರನ್ನು ಬೆಂಬಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿಯಲ್ಲಿ ನಿನ್ನೆ ಸತೀಶ್ ಜಾರಕಿಹೊಳಿ ಅವರು ಲಖನ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ಮತ ವಿಭಜನೆಯಾಗಲಿದೆ ಎಂದು ಹೇಳಿದ್ದಾರೆ. ಲಖನ್ ಅವರು ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಾರೋ ಅಥವಾ ಸ್ವತಂತ್ರವಾಗಿ ಸ್ಪರ್ಧಿಸುತ್ತಾರೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ