Breaking News

ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

Spread the love

ಬೆಂಗಳೂರು: ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ನವೆಂಬರ್‌ 26ರೊಳಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ಸೂಚನೆ ನೀಡಿದೆ.

ಡಿಸೆಂಬರ್‌ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನವೆಂಬರ್‌ 26 ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ವಕೀಲರು ಹೇಳಿದ್ದರು.

 

ನ. 26ರೊಳಗೆ ಮೀಸಲಾತಿ ನೀಡಿದ್ರೆ ಶೀಘ್ರ ಚುನಾವಣೆ ಡಿಸೆಂಬರ್‌ ಅಂತ್ಯದೊಳಗೆ ಚುನಾವಣೆ ನಡೆಸಲಾಗುವುದು ಚುನಾವಣಾ ಆಯೋಗದ ಪರ ವಕೀಲ ಕೆ.ಎನ್‌ ಘಣೀಂದ್ರ ಹೇಳಿಕೆ ನೀಡಿದರು. ಇದೇ ವೇಳೆ ಚುನಾವಣಾ ಆಯೋಗದ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡು ನಿರ್ದೇಶನ ನೀಡಿದ ಹೈಕೋರ್ಟ್‌ ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ ಅಂತ ಸೂಚನೆ ನೀಡಿದೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ