ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ, ಇಂದು ನಿಧನರಾಗಿದ್ದಾರೆ ( Actor Dunia Vijay Father No More).
ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ (81) ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಇಂತಹ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ದುನಿಯಾ ವಿಜಯ್ ( Sandalwood Actor Dunia Vijay ) ತಂದೆ ರುದ್ರಪ್ಪ ಅವರು, ಇಂದು ಬೆಳಿಗ್ಗೆ 7.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.
ಮೃತ ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ಅವರ ಅಂತ್ಯಕ್ರಿಯೆಯನ್ನು ಆನೇಕಲ್ ತಾಲೂಕಿನ ಕುಂಬಾರಹಳ್ಳಿಯಲ್ಲಿ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ.
ಅಂದಹಾಗೇ, ಕಳೆದ ಜುಲೈನಲ್ಲಿ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನರಾಗಿದ್ದರು. ಅವರ ಬಳಿಕ, ಇಂದು ಅವರ ತಂದೆ ರುದ್ರಪ್ಪ ವಿಧಿವಶರಾಗಿದ್ದಾರೆ.