Breaking News

ಲಖನ್ ಜಾರಕಿಹೊಳಿ ಅವರಿಗೆB.J.P. ಟಿಕೆಟ್ ನೀಡಿಲ್ಲ, ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ..?

Spread the love

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ 25 ಸ್ಥಾನಗಳಲ್ಲಿ 20 ಅಭ್ಯರ್ಥಿಗಳನ್ನು ಘೋಷಿಸಿದೆ.

ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿಲ್ಲ.

ಮಹಂತೇಶ್ ಕವಟಗಿಮಠ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಲಖನ್ ಜಾರಕಿಹೊಳಿಯವರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಟಿಕೆಟ್ ಕೈ ತಪ್ಪಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಪರವಾಗಿ ಟಿಕೆಟ್ ಕೇಳಿದ್ದ ರಮೇಶ್ ಜಾರಕಿಹೊಳಿ ಪ್ರಚಾರವನ್ನು ಕೂಡ ಆರಂಭಿಸಿದ್ದರು.

ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿದ್ದು, ಲಖನ್ ಜಾರಕಿಹೊಳಿ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಹೂತಿಟ್ಟ ಶವದ ಹಿಂದಿನ ಕಾರಣ ಬಯಲು

Spread the loveಚಾಮರಾಜನಗರ: ಹೂತಿಟ್ಟ ಶವದಿಂದ ಮುಂಗೈ ಹೊರಬಂದ ಪ್ರಕರಣದಲ್ಲಿ ಮಹಿಳೆಯ ಗುರುತು ಪತ್ತೆಯಾಗಿದ್ದು, ಕೊಲೆಗೈದ ಪ್ರಿಯಕರ ಸಿಕ್ಕಿಬಿದ್ದಿದ್ದಾನೆ. ಕೊಳ್ಳೇಗಾಲ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ