Breaking News

021-22 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 10+1 ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Spread the love

2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 10+1 ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಎಸ್.ಸಿ-11, ಎಸ್.ಟಿ-04 ಹಾಗೂ ಸಾಮಾನ್ಯ-45, ಒಟ್ಟು-60 ಗುರಿಗಳನ್ನು ನಿಗದಿಪಡಿಸಲಾಗಿದ್ದು, ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವ 18 ರಿಂದ 60 ವಯೋಮಿತಿಯ ಎಸ್.ಸಿ/ಎಸ್.ಟಿ ಹಾಗೂ ಸಾಮಾನ್ಯ ವರ್ಗದ ಸದಸ್ಯರುಗಳು ಅರ್ಜಿ ಸಲ್ಲಿಸಬಹುದು.

ಸದರಿ ಅರ್ಜಿಯನ್ನು ಈ ಕಛೇರಿಯಿಂದ ಅಥವಾ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಕಛೇರಿಗಳಲ್ಲಿ ಪಡೆದು ಭರ್ತಿ ಮಾಡಿ ಡಿಸಂಬರ್ 12 ರೊಳಗಾಗಿ ಅವಶ್ಯಕ ದಾಖಲೆಗಳನ್ನು ದೃಢೀಕರಿಸಿ ಮೂರು ಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ0831-2431294 ಯನ್ನು ಸಂಪರ್ಕಿಸಬಹುದು ಎಂದು ಬೆಳಗಾವಿಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ (ನಿ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ