Breaking News

ಸೇರಿ ಮೂವರು ಸಚಿವರ ದಿಢೀರ್ ರಾಜೀನಾಮೆ

Spread the love

ಜೈಪುರ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಸಂಪುಟ ಪುನಾರಚನೆ ಕಸರತ್ತು ಆರಂಭವಾಗಿದ್ದು, ಮೂವರು ಸಚಿವರು ರಾಜೀನಾಮೆ ನೀಡಿದ್ದಾರೆ.

ಕಂದಾಯ ಸಚಿವ ಹರೀಶ್ ಚೌಧರಿ, ವೈದ್ಯಕೀಯ ಮತು ಆರೋಗ್ಯ ಸಚಿವ ಡಾ.ರಘು ಶರ್ಮಾ ಮತ್ತು ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋತಸ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ರಾಜೀನಾಮೆ ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ರವಾನಿಸಿದ್ದಾರೆ.

ರಾಜಸ್ಥಾನ ಸಚಿವ ಸಂಪುಟದ ಮೂವರು ಸಚಿವರು ರಾಜೀನಾಮೆ ನೀಡಿದ್ದು, ಅವರು ಪಕ್ಷಕ್ಕಾಗಿ ಕೆಲಸ ಮಾಡುವ ಬಯಕೆ ವ್ಯಕ್ತಪಡಿಸಿದ್ದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ರಾಜಸ್ಥಾನ ಸಚಿವ ಸಂಪುಟ ಪುನರಾಚನೆಯಾಗಲಿದೆ ಎಂಬ ಮಾತು ಕೇಳಿಬಂದಿತ್ತು. ಇದೀಗ ಮೂವರು ಸಚಿವರು ರಾಜೀನಾಮೆ ನೀಡಿದ್ದು, ನೂತನ ಸಚಿವರ ಆಯ್ಕೆ ಕಸರತ್ತು ಆರಂಭವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ