Breaking News
Home / ರಾಜಕೀಯ / ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ

ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ

Spread the love

ಬಾಗಲಕೋಟೆ: ರೈತರ ಆದಾಯ ದ್ವಿಗುಣಗೊಳಿಸಬೇಕು. ರೈತರಿಗೆ ಅನುಕೂಲ ಆಗಬೇಕೆಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ತಂದಿದ್ರು. ಆದ್ರೆ ಎಲ್ಲೊ ಒಂದು ಕಡೆ ಹೊಸ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲ ಆಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಷಾದ ವ್ಯಕ್ತಪಡಿಸಿದರು.

ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ಹೊಸ ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ತಿಳಿಸಿ ಹೇಳುವಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ಒಬ್ಬ ಪೂರ್ಣಾವಧಿ ಅಧ್ಯಕ್ಷ ಸಿಗದ ಹೀನಾಯ ಸ್ಥಿತಿಗೆ ಬಂದು ತಲುಪಿದೆ. ಏಳು ವರ್ಷದ ಹಿಂದೆ ಮೋದಿ ಅವರು ಕೈ ಮುಕ್ತ ಭಾರತ ಆಗುತ್ತೆ ಎಂದು ಹೇಳಿದರು. ಆಗ ಅವರಿಗೆ ಕೆಲವರು ಗೇಲಿ ಮಾಡಿದರು. ಇವ್ರೇನು ಭವಿಷ್ಯ ಹೇಳ್ತಾರಾ? ಕಾಲಜ್ಞಾನಿಗಳಾ ಅಂದಿದ್ರು. ಈಗ ಅವರ ಮಾತು ನಿಜ ಆಗುತ್ತಿದೆ ಎಂದು ತಿಳಿಸಿದರು. 

ಇನ್ನೊಂದು ವರ್ಷದಲ್ಲಿ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ. ಕಾಂಗ್ರೆಸ್ ಮುಕ್ತ ಭಾರತ ಆಗುತ್ತೆ. ಕಾಂಗ್ರೆಸ್ ನೀತಿಗೆಟ್ಟ ನಡವಳಿಕೆ ಬಗ್ಗೆ ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಲು ಇಷ್ಟಪಡುತ್ತೇನೆ. ಕಾಂಗ್ರೆಸ್ ಅವರು ನಮ್ಮ ಪ್ರಧಾನಿ ಮೋದಿ ಬಗ್ಗೆ, ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ, ಸಿಎಂ ಬಗ್ಗೆ ನಾಲಿಗೆ ಮೇಲೆ ಹತೋಟಿ ಇಲ್ಲದೇ, ಬಾಯಿಗೆ ಬಂದಂಗೆ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ. ಅವರ ಬಳಸುತ್ತಿರುವ ಭಾಷೆ ಸಂಸದೀಯ ಭಾಷೆ ಅಲ್ಲ. ಅಂತಹ ಒಂದು ಕೆಟ್ಟ ನಡವಳಿಕೆ ನಾವು ಕಾಣುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ