Breaking News
Home / ರಾಜಕೀಯ / ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆ:B.S.Y.

ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆ:B.S.Y.

Spread the love

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಸ್ವಲ್ಪ ತಡವಾದರೂ ಈ ದೃಢ ನಿರ್ಧಾರ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದು ಬಾಗಲಕೋಟೆಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ. ಪ್ರತಿಷ್ಠೆ ಬದಿಗಿಟ್ಟುರೈತರ ಹೋರಾಟ ನೋಡಿದ ಮೇಲೆ ನರೇಂದ್ರ ಮೋದಿಯವರು ಮೂರು ಕಾಯ್ದೆ ಹಿಂಪಡೆದಿದ್ದು, ದೇಶದಲ್ಲಿ ರೈತರ ವಿಶ್ವಾಸ, ಗೌರವ ಹೆಚ್ಚಾಗಿದೆ. ರೈತ ಸಮುದಾಯಕ್ಕೆ ಬಹಳ ಒಳ್ಳೆಯದಾಗುತ್ತೆ. 11ತಿಂಗಳ ಸತ್ಯಾಗ್ರಹ ನಡೆಸಿಕೊಂಡು ಬಂದಿದ್ದಾರೆ. ತಡವಾದರೂ ಅದರ ಸತ್ಯಾಂಶ ನೋಡಿಕೊಂಡು ಪ್ರಧಾನಿಯವರು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ