Breaking News

ಬೈಕ್​ ಅನ್ನು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿಯನ್ನು ದೋಚಿದ್ದಾರೆ.

Spread the love

ದಾವಣಗೆರೆ: ತಡ ರಾತ್ರಿ ಬೈಕ್​ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಸವಾರರ ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿಯನ್ನು ದೋಚಿದ್ದಾರೆ. ಜಗದೀಶ್ (42) ವಿಶ್ವನಾಥ (31) ಹಣ ಕಳೆದುಕೊಂಡ ರೈತರು. ಇಬ್ಬರೂ ರೈತರು ವೀಳ್ಯದೆಲೆ ಮಾರಾಟ ಮಾಡಿ, ಗ್ರಾಮಕ್ಕೆ ವಾಪಸ್ಸಾಗುವಾಗ ತಡ ರಾತ್ರಿ ಈ ಘಟನೆ ನಡೆದಿದೆ. ಹರಿಹರ ತಾಲೂಕಿನ ಬೆಳ್ಳೂಡಿ- ರಾಮತೀರ್ಥ ಗ್ರಾಮಗಳ ನಡುವಿನ ಸೇತುವೆ ಮೇಲೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ರೈತರಿಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ 4.69 ಲಕ್ಷ ರೂಪಾಯಿ ದೋಚಿದ್ದಾರೆ.

ಇಬ್ಬರು ರೈತರು ಹೋಗುತ್ತಿದ್ದ ವೇಳೆ ಮತ್ತೊಂದು ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ರೈತರ ಬೈಕ್​ಗೆ ಅಡ್ಡ ಹಾಕಿದ್ದಾರೆ. ಅಷ್ಟರಲ್ಲಿ ಒಟ್ಟು ನಾಲ್ವರು ಅಲ್ಲಿ ಜಮಾಯಿಸಿದ್ದಾರೆ. ಅವರೆಲ್ಲ ಚಾಕು ತೊರಿಸಿ, ರೈತರನ್ನು ಹೆದರಿಸಿದ್ದಾರೆ. ರೈತರಿಬ್ಬರೂ ತೀವ್ರ ಪ್ರತಿರೋಧ ವ್ಯಕ್ತಪಡಿಸಿದಾಗ ಕಣ್ಣಿಗೆ ಖಾರದ ಪುಡಿ ಎರಚಿ, ಹಣ ದೋಚಿ ಪರಾರಿಯಾಗಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ