K.P.CC ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ, ಅಲ್ಲಿನ ಜನರ ಅಹವಾಲು ಆಲಿಸುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ.
ಕೆಲ ದಿನಗಳ ಹಿಂದೆ ದಕ್ಷಿಣ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆ ಆಲಿಸಿದ್ದ ಅವರು, ಭಾನುವಾರ ಪುನಃ ಕ್ಷೇತ್ರದಲ್ಲಿ ಸಂಚರಿಸಿ ಅಹವಾಲು ಆಲಿಸಿದರು. ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ ಸಮಾಜ ಮೂವರು ಮೃತ ಕುಟುಂಬಸ್ಥರ ಮನೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು.
ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದ ಬೆಳಗಾವಿ ದಕ್ಷಿಣ ಮತಕೇತ್ರ ವ್ಯಾಪ್ತಿಯ ವಡಗಾಂವ ನೇಕಾರ ಸಮಾಜದ ಪಾಂಡು ಉಪರಿ , ಗಣಪತಿ ಬುಚಡಿ ಸಾವನಪ್ಪಿಸಿದ್ದರು . ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ಧೈರ್ಯದಿಂದ ಜೀವನ ಸಾಗಿಸಬೇಕು. ಕುಟುಂಬವನ್ನು ಚೆನ್ನಾಗಿ ನೋಡಿಕೊಂಡು ಸಾಗಬೇಕು. ನಿಮಗೆಲ್ಲ ಸಹಕಾರ ನೀಡುವುದಾಗಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಹಾಗೂ ಸೌಲಭ್ಯ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ:
ಈ ವೇಳೆ ಬೆಳಗಾವಿ ದಕ್ಷಿಣ ಮತಕೇತ್ರ ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದ ಭತ್ತ ನೀರಲ್ಲಿ ಮುಳಗಿ ಸಮಸ್ಯೆಗೆ ಸಿಲುಕ್ಕಿದ್ದಾರೆ. ಈ ಹಿನ್ನೆಲೆಯಲ್ಲಿ ಸತೀಶ ಜಾರಕಿಹೊಳಿ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಮಳೆಯಲ್ಲಿ ಕ್ಷೇತ್ರ ದ ದರ್ಶನ ಮಾಡಿ, ಮಳೆಯಿಂದ ಆಗಿರುವ ಅನಾಹುತಗಳನ್ನು, ಸಮಸ್ಯೆಗಳನ್ನು ಖುದ್ದಾಗಿ ಪರಶೀಲಿಸಿ, ಜನರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.