Breaking News

ಕಂಪ್ಲಿಯ ಸೇತುವೆ ಮುಳುಗಡೆ: ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆ ಮಧ್ಯೆ ಸಂಚಾರ ಸ್ಥಗಿತ

Spread the love

ಕಂಪ್ಲಿ : ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯನ್ನು ನೇರವಾಗಿ ಸಂಪರ್ಕಿಸುತ್ತಿದ್ದ ಕಂಪ್ಲಿಯ ಸೇತುವೆ ಮುಳುಗಡೆಯಾಗಿದ್ದು, ಉಭಯ ಜಿಲ್ಲೆಗಳ ಮಧ್ಯೆ ನೇರ ರಸ್ತೆ ಸಂಚಾರ ಸ್ಥಗಿತವಾಗಿದೆ. ಕಂಪ್ಲಿಯ ಸೇತುವೆ ಮೇಲೆ ಯಾವುದೇ ಸಂಚಾರಕ್ಕೆ ಅವಕಾಶವಿಲ್ಲದಂತೆ ಪೊಲೀಸರು ಪಹರೆ ಕಾಯುತ್ತಿದ್ದಾರೆ.

 

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಗೆ ಕೇವಲ ಎರಡು ಅಡಿ ಮಾತ್ರ ಬಾಕಿ ಉಳಿದಿದೆ. ಪ್ರವಾಹದ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಿದ್ದಾರೆ.

ಸೇತುವೆ ದುರ್ಬಲವಾಗಿರುವ ಕಾರಣಕ್ಕೆ ಪೊಲೀಸರು ದ್ವಿಚಕ್ರ ವಾಹನಗಳಿಗೆ ಸೇತುವೆ ಮೇಲೆ ಸಂಚರಿಸಲು ಅವಕಾಶ ಮಾಡಿಕೊಡುತ್ತಿಲ್ಲ. ನದಿಯಲ್ಲಿ ಈಗಾಗಲೇ ಪ್ರಮಾಣದ ನೀರು ಹರಿಸಲಾಗುತ್ತಿದೆ. ಒಂದು ಲಕ್ಷ ಕ್ಯುಸೆಕ್ ನೀರು ಹರಿಸಿದರೆ ಸೇತುವೆ ಸಂಪೂರ್ಣ ಮುಳುಗಡೆಯಾಗುತ್ತದೆ.


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ