Breaking News

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ

Spread the love

ಬೆಂಗಳೂರು : ರಾಜ್ಯ ಸರ್ಕಾರವು (State Government) ಸರ್ಕಾರಿ ನೌಕರರಿಗೆ (Government Employees) ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ.

 

 

ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ ಮೂಲಕ ಬಡ್ತಿಗಾಗಿ ಕಾಯುವ ಸರ್ಕಾರಿ ನೌಕರರ ಸಂಕಷ್ಟ ತಪ್ಪಲಿದೆ.

 

ಅ.28 ರಂದು ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ನೀಡುವ ಕುರಿತು ಕ್ರಮ ಕೈಗೊಂಡು ಅನುಪಾಲನಾ ವರದಿ ಕಳುಹಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನವೆಂಬರ್ 15 ರಂದು ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.


Spread the love

About Laxminews 24x7

Check Also

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

Spread the love ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ