Breaking News

ಉಡುಪಿ – ಬಾಲಕಿ ಮೇಲೆ ನಿರಂತರ ಅತ್ಯಾಚಾರ

Spread the love

ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳುಗಳಿಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಪೊಕ್ಸೊ ಕಾಯಿದೆಯಡಿ ಬಂಧಿಸಿದ್ದಾರೆ.

ಸಂದೀಪ್ ನಾಯ್ಕ ಹಾಗೂ ವಿಘ್ನೇಶ್ ನಾಯ್ಕ ಬಂಧಿತ ಆರೋಪಿಗಳು.

 

ಬಾಲಕಿಯ ತಂದೆ ಹಾಗೂ ತಾಯಿ ಕೆಲಸಕ್ಕೆಂದು ಹೊರ ಹೋದ ಸಂದರ್ಭ ಆಕೆ ಮನೆಯಲ್ಲಿ ಒಬ್ಬಳೇ ಇರುತ್ತಿದ್ದಳು. ಈ ವೇಳೆ ಸಮೀಪದ ಮನೆಯಲ್ಲಿರುವ ಬಾಲಕಿಯ ಸಂಬಂಧಿಕರಾದ ಆರೋಪಿಗಳು, ಮನೆಗೆ ಬಂದು, ನಿನ್ನ ತಂದೆ ತಾಯಿಯನ್ನು ಕೊಲ್ಲುವುದಾಗಿ ಬೆದರಿಸಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ.

ಬಾಲಕಿಯ ತಾಯಿ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ.

ವಿವಾಹಿತ ಸಂದೀಪ್ ನಾಯ್ಕ, ಪೈಂಟರ್ ಕೆಲಸ ಮಾಡುತ್ತಿದ್ದರೆ, ವಿಘ್ನೇಶ್ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ಇಬ್ಬರೂ ಆರೋಪಿಗಳ ಮೇಲೆ ಈ ಹಿಂದೆಯೂ ಇಂತಹ ಆರೋಪಗಳು ಕೇಳಿಬಂದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ