Breaking News

ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ; ಸಿಎಂ ಬೊಮ್ಮಾಯಿ

Spread the love

ಬೆಂಗಳೂರು : ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆಹಾನಿ ಸಂಭವಿಸಿದ್ದು, 500 ಕೋಟಿ ರೂ.ಗಳನ್ನು ರಸ್ತೆ ದುರಸ್ತಿಪಡಿಸಲು ಬಿಡುಗಡೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಇಂದಿನಿಂದ ಆರಂಭವಾಗಲಿದ್ದು, ಪರಿಹಾರ ಆಯಪ್ ನಲ್ಲಿ ನಷ್ಟದ ವಿವರ ದಾಖಲಿಸಲಾಗುತ್ತದೆ. ಅದರಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೃಷಿ, ಕಂದಾಯ, ತೋಟಗಾರಿಕೆ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ ಸಿಎಂ, ಬೆಳೆ ನಷ್ಟ ಪರಿಹಾರ ವಿತರಣೆಯೂ ತ್ವರಿತವಾಗಿ ಆಗಬೇಕು. 15ರಿಂದ 20 ದಿನ ಬೆಳೆ ಹಾನಿ ಸಮೀಕ್ಷೆ ನಡೆಸಲು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ