ಬೆಂಗಳೂರು: ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಜನ ಪ್ರಯಾಣಿಕರನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನವೆಂಬರ್ 20 ರಂದು ಕೊಲಂಬೊದಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ವೇಳೆ 10 ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನ ಮರೆಮಾಚಿ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
Laxmi News 24×7