Home / ರಾಜಕೀಯ / ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.

ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.

Spread the love

ಬೆಂಗಳೂರು, ನ.22- ಕಳೆದ ಎರಡು ವಾರಗಳಿಂದಲೂ ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಸತತವಾಗಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗುತ್ತಿದೆ.

ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಹಾಗೂ ಭಾರೀ ಪ್ರಮಾಣದ ಮಳೆಯಾಗಿದೆ.

ರಾಮನಗರದ ಮೆಳ್ಳೇಹಳ್ಳಿ ಸೇತುವೆ ತೊರೆ ನೀರಿನಲ್ಲಿ ಕೊಚ್ಚಿ ಹೋಗಿದೆ. ನ.1ರಿಂದ ಈತನಕ ರಾಜ್ಯದಲ್ಲಿ ವಾಡಿಕೆಗಿಂತ ಶೇ.270ಕ್ಕೂ ಹೆಚ್ಚು ಮಳೆಯಾಗಿದೆ. ರಾಜ್ಯದ ಸರಾಸರಿ ವಾಡಿಕೆ ಪ್ರಮಾಣ 34.8 ಮಿ.ಮೀಟರ್ ಆಗಿದ್ದು , 129.1 ಮಿ.ಮೀಟರ್ ಅಕ ಪ್ರಮಾಣದ ಮಳೆಯಾಗಿದೆ.

ಅದರಲ್ಲೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.330ಕ್ಕೂ ಹೆಚ್ಚು ಮಳೆಯಾದ ವರದಿಯಾಗಿದೆ. ಉತ್ತರ ಒಳನಾಡಿನಲ್ಲೂ ಶೇ.164ಕ್ಕೂ ಹೆಚ್ಚು ಮಳೆಯಾಗಿದ್ದರೆ, ಮಲೆನಾಡು ಭಾಗದಲ್ಲಿ ಶೇ.281ಕ್ಕೂ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಹಿಂಗಾರು ಹಂಗಾಮಿನ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ.85ರಷ್ಟು ಅಕ ಪ್ರಮಾಣದ ಮಳೆಯಾಗಿದೆ.

ನವೆಂಬರ್‍ನಲ್ಲಿ ಇಷ್ಟೊಂದು ಮಳೆಯಾಗಿರುವುದು ಹೊಸ ದಾಖಲೆಯನ್ನೇ ನಿರ್ಮಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು.

ಹವಾಮಾನ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತಮುತ್ತ ಇಂದು ಸಂಜೆ ಹಾಗೂ ರಾತ್ರಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಇನ್ನು ಒಂದು ವಾರ ಮುಂದುವರೆಯುವ ಸಾಧ್ಯತೆಗಳಿವೆ. ನ.26ಕ್ಕೆ ಮತ್ತೊಂದು ವಾಯುಭಾರ ಕುಸಿತ ಪ್ರಬಲವಾಗುತ್ತಿದ್ದು, ಆನಂತರವೂ ಮತ್ತೊಂದು ಸುತ್ತಿನ ಮಳೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದುವರೆಯುವುದು ಎಂದು ಹೇಳಿದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ