Breaking News

ಹಾಸನದಲ್ಲಿ ಇಂದು 13 ಮಂದಿಗೆ ಕೊರೊನಾ ಸೋಂಕು, ಒಂದು ಸಾವು…….

Spread the love

ಹಾಸನ: ಕೊರೊನಾ ಸೋಂಕು ಹಾಸನದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಕೂಡ 13 ಜನರಿಗೆ ಕೋವಿಡ್ ವೈರಸ್ ಹರಡಿದ್ದು, ಓರ್ವ ಸಾವನಪ್ಪಿದ್ದಾರೆ.

ಅರಸೀಕೆರೆ ನಿವಾಸಿ 77 ವರ್ಷದ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಸೋಂಕಿತ ನಿಮೋನಿಯಾ, ರಕ್ತದ ಒತ್ತಡ ಸೇರಿದಂತೆ ಇತರೆ ಸಮಸ್ಯೆಯಿಂದ ಬಳಲುತ್ತಿದ್ದು, ಜುಲೈ 3ರಂದು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಟಲು ದ್ರವ ಪರೀಕ್ಷೆ ಮಾಡಿದ್ದು, ಈ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.

ಚಿಕಿತ್ಸೆ ನೀಡಲಾಗುತ್ತಿದ್ದರೂ ಫಲಕಾರಿಯಾಗದೇ ಕೊನೆ ಉಸಿರು ಎಳೆದಿದ್ದಾರೆ. ಜಿಲ್ಲಾಡಳಿತದ ವತಿಯಿಂದ ಅಂತ್ಯಕ್ರಿಯೆ ಮಾಡಲಾಗಿದೆ. ಇಲ್ಲಿವರೆಗೂ ಕೊರೊನಾದಿಂದ ಜಿಲ್ಲೆಯಲ್ಲಿ ಒಟ್ಟು 8 ಸಾವು ಸಂಭವಿಸಿವೆ. ಇಂದು ಹೊಸದಾಗಿ 13 ಪ್ರಕರಣ ಹಾಸನ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಇವರಲ್ಲಿ ಅರಸೀಕೆರೆ ತಾಲೂಕಿನಲ್ಲಿ 5, ಚನ್ನರಾಯಪಟ್ಟಣದ 1 ಪ್ರಕರಣ, ಹಾಸನದಲ್ಲಿ 7 ಪ್ರಕರಣ ಸೇರಿ ಒಟ್ಟು 13 ಪ್ರಕರಣ ಬಂದಿದೆ.

ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 492 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. 255 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 299 ಜನರು ಚಿಕಿತ್ಸೆ ಪಡೆಯುತ್ತಿರುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ನಾವೆಲ್ಲರು ಜೆಡಿಎಸ್​ ಪರ ಕೆಲಸ ಮಾಡ್ಬೇಕು: ಕಾರ್ಯಕರ್ತರಿಂದ ಪ್ರತಿಜ್ಞೆ ಮಾಡಿಸಿದ ಎ. ಮಂಜು

Spread the love ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅರಕಲಗೂಡು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಮಾಜಿ ಸಚಿವ ಎ. ಮಂಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ