Breaking News

ಲಕ್ಷ್ಮಿ ಹೆಬ್ಬಾಳಕರ ಹೆಸರು ಹೇಳುತ್ತಿದ್ದಂತೆಯೇ ‘ಥೂ… ಥೂ…’ ಎಂದು ಉಗಿದ ಎಂದು ಪ್ರತಿಕ್ರಿಯಿಸಿದರು.ರಮೇಶ!

Spread the love

ಬೆಳಗಾವಿ: ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು, ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೆಸರೇಳುತ್ತಿದ್ದಂತೆಯೇ ‘ಥೂ… ಥೂ…’ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ನಾಮಪತ್ರ ಸಲ್ಲಿಕೆಗೆ ಬಂದಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಚುನಾವಣೆ ರಮೇಶ್ ಜಾರಕಿಹೊಳಿ ವರ್ಸಸ್ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಹಣಾಹಣಿಯಾ?’ಎನ್ನುವ ಪ್ರಶ್ನೆಗೆ ಸಿಡಿಮಿಡಿಯಾಗಿ ‘ಥೂ ಥೂ’ ಎಂದು ಹೇಳಿ ಹೊರಟರು.

 

ಇದಕ್ಕೂ ಮುನ್ನ, ‘ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೊದಲ ಪ್ರಾಶಸ್ತ್ಯ ಮತದಲ್ಲಿ ಗೆಲವು ಸಾಧಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋಲಿಸುವುದೊಂದೆ ನಮ್ಮ ಗುರಿ’ಎಂದು ಹೇಳಿದರು.

‘ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸುವುದಕ್ಕಾಗಿ 2ನೇ ಅಭ್ಯರ್ಥಿಗೆ ಬೆಂಬಲ ನೀಡುವುದಕ್ಕೆ ಸಂಬಂಧಿಸಿದಂತೆ, ನ.29ರಂದು ದೆಹಲಿಗೆ ಹೋಗಿ ವರಿಷ್ಠರನ್ನು ಒಪ್ಪಿಸುವ ಕೆಲಸವನ್ನು ಮಾಡುತ್ತೇನೆ. ಮೊದಲ ಪ್ರಾಶಸ್ತ್ಯ ಮತದಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಬೇಕು. ‌2ನೇ ಪ್ರಾಶಸ್ತ್ಯದ ಮತದಲ್ಲಿ ಕಾಂಗ್ರೆಸ್ ಸೋಲಿಸಬೇಕು ಎಂದು ಪ್ರಚಾರ ಮಾಡುತ್ತಿದ್ದೇನೆ’ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ