ಬೆಳಗಾವಿ : ಡಿಸೆಂಬರ್ 13ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನವನ್ನು ಕೋವಿಡ್ ಮಾರ್ಗಸೂಚಿ ಪಾಲನೆಯ ಜತೆಗೆ ವಸತಿ, ಸಾರಿಗೆ ಹಾಗೂ ಊಟೋಪಾಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಚ್ಚುಕಟ್ಟಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಸೂಚನೆ ನೀಡಿದರು.

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ (ನ.23) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.