Breaking News
Home / ಜಿಲ್ಲೆ / ಬೆಂಗಳೂರು / ಅಪೌಷ್ಟಿಕತೆ, ರಕ್ತಹೀನತೆ.. ರಾಜ್ಯದ 14 ಲಕ್ಷ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ

ಅಪೌಷ್ಟಿಕತೆ, ರಕ್ತಹೀನತೆ.. ರಾಜ್ಯದ 14 ಲಕ್ಷ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ

Spread the love

ಬೆಂಗಳೂರು: ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೊಟೀನ್ ಕೊರತೆಯಿಂದ ಬಳಲುತ್ತಿರುವ ಆರರಿಂದ 15 ವರ್ಷದೊಳಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳ ವಿದ್ಯಾರ್ಥಿಗಳು ಕೊರತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದರಿಂದ ಕಾರ್ಯಕ್ರಮದ ಅಡಿ ಪ್ರಯೋಜನ ಪಡೆಯಲಿದ್ದಾರೆ.

ಡಿಸೆಂಬರ್ 1ರಿಂದ ಕಾರ್ಯಕ್ರಮ ಆರಂಭ: ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ಒಂದರಿಂದ 8ನೇ ತರಗತಿವರೆಗೆ ಓದುತ್ತಿರುವ 14,44,322 ವಿದ್ಯಾರ್ಥಿಗಳು ಫಲಾನುಭವಿಗಳಾಗಲಿದ್ದಾರೆ. ಡಿಸೆಂಬರ್‌ 1ರಿಂದ ಪ್ರಾರಂಭವಾಗುವ ಕಾರ್ಯಕ್ರಮವು ಮಾರ್ಚ್ 2022ರವರೆಗೆ ಮುಂದುವರೆಯಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡಲಾಗುತ್ತದೆ. ಪ್ರತಿ ವಿದ್ಯಾರ್ಥಿಯು ನಾಲ್ಕು ತಿಂಗಳವರೆಗೆ ತಿಂಗಳಿಗೆ 10 ಮೊಟ್ಟೆ/ಬಾಳೆಹಣ್ಣುಗಳನ್ನು ಪಡೆಯುತ್ತಾನೆ.

ಯಾದಗಿರಿ ಜಿಲ್ಲೆಯಲ್ಲಿ ಶೇ.74ರಷ್ಟು ವಿದ್ಯಾರ್ಥಿಗಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಕಲಬುರಗಿ ಶೇ.72.4, ಬಳ್ಳಾರಿ ಶೇ.72.3, ಕೊಪ್ಪಳ ಶೇ.70.7, ರಾಯಚೂರು ಶೇ.70.6, ಬೀದರ್‌ ಶೇ.69.1 ಮತ್ತು ವಿಜಯಪುರದಲ್ಲಿ ಶೇ.68ರಷ್ಟು ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ