Breaking News
Home / ಜಿಲ್ಲೆ / ಬೆಂಗಳೂರು / ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಂಸಲೇಖಾ:!?

ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಂಸಲೇಖಾ:!?

Spread the love

ಬೆಂಗಳೂರು: ನಾದಬ್ರಹ್ಮ ಹಂಸಲೇಖಾ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ನಡುವೆ ಹಂಸಲೇಖಾ ಜೊತೆ ನಾನೂ ಪೊಲೀಸ್ ಠಾಣೆಗೆ ಬರುತ್ತೇನೆ ಎಂದು ನಟ ಚೇತನ್ ಪೋಸ್ಟ್ ಮಾಡಿದ್ದು, ಭಜರಂಗದಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡಿರುವ ಭಜರಂಗದಳ ಕಾರ್ಯಕರ್ತರು ಹಂಸಲೇಖಾ ಜೊತೆ ಠಾಣೆಗೆ ನಟ ಚೇತನ್ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ. ಇನ್ನೊಂದೆಡೆ ಹಂಸಲೇಖಾ ಬೆಂಬಲಿಗರು ಠಾಣೆಯ ಮುಂದೆ ಜಮಾವಣೆಗೊಂಡಿದ್ದು, ಹಂಸಲೇಖಾ ಪರವಾಗಿ ಘೋಷಣೆ ಕೂಗುತ್ತಿದ್ದಾರೆ.

ಒಟ್ಟಾರೆ ಹಂಸಲೇಖಾ ವಿಚಾರಣೆಗೆ ಹಾಜರಾಗುತ್ತಿರುವ ಬೆನಲ್ಲೇ ನಾನೂ ಹಂಸಲೇಖಾ ಜೊತೆ ಠಾಣೆಗೆ ಬರುತ್ತೇನೆ ಎಂದು ಹೇಳುವ ಮೂಲಕ ನಟ ಚೇತನ್ ಅನಗತ್ಯ ಗೊಂದಲ ಸೃಷ್ಟಿಸಿದ್ದು, ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆದಿದೆ.


Spread the love

About Laxminews 24x7

Check Also

ಟ್ರಾವೆಲ್ಸ್ ಹೆಸರಲ್ಲಿ ನೂರಾರು ಟ್ಯಾಕ್ಸಿ ಮಾಲಕರಿಗೆ ಪಂಗನಾಮ ಹಾಕಿ ಟ್ರಾವೆಲ್ಸ್ ಬಾಗಿಲು ಹಾಕಿ ಸುಮಾರು 10 ಕೋಟಿ ಮೌಲ್ಯದ ವಾಹನಗಳ ಜೊತೆ ಪರಾರಿ

Spread the loveಬೆಂಗಳೂರು : ಟ್ರಾವೆಲ್ಸ್ ಹೆಸರಲ್ಲಿ ನೂರಾರು ಟ್ಯಾಕ್ಸಿ ಮಾಲಕರಿಗೆ ಪಂಗನಾಮ ಹಾಕಿ ಟ್ರಾವೆಲ್ಸ್ ಬಾಗಿಲು ಹಾಕಿ ಸುಮಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ