Breaking News

ಬೊಮ್ಮಾಯಿಯವರೇ, ಖಾಲಿ ಡಬ್ಬ ಅಲ್ಲಾಡಿಸಿ ಸದ್ದು ಮಾಡಿದಿರಲ್ಲವೇ? -ಕಾಂಗ್ರೆಸ್ ಟೀಕೆ

Spread the love

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

 

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಸಿಎಂ ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ. ಸಾಮಾನ್ಯ ವರ್ಗದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಹೀಗಾಗಿ ಇದುವರೆಗೂ ಕೇವಲ 16 ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ದೊರಕಿದೆ. ಬೊಮ್ಮಾಯಿಯವರೇ, ಇಂತಹ ಖಾಲಿ ಡಬ್ಬ ಅಲ್ಲಾಡಿಸಿ ಹೆಚ್ಚು ಸದ್ದು ಮಾಡಿದಿರಲ್ಲವೇ? ಎಂದು ಪ್ರಶ್ನಿಸಿದೆ.

ರಾಜ್ಯದ ರೈತ ಕುಟುಂಬಗಳಿಗೆ ಆರ್ಥಿಕ ಬಲ‌ ತುಂಬುವ ಉದ್ದೇಶದಿಂದ ಬಸವರಾಜ ಬೊಮ್ಮಾಯಿ ಅವರು ‘ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ’ ಯೋಜನೆಯನ್ನು ಜಾರಿಗೆ ತಂದಿದ್ದಾರೆ.


Spread the love

About Laxminews 24x7

Check Also

ವಾರದಲ್ಲಿ 6 ದಿನ ಮೌನ ವ್ರತ: ಭಕ್ತರ ಅಚ್ಚರಿಗೆ ಕಾರಣವಾಯ್ತು ಗವಿಸಿದ್ದೇಶ್ವರ ಸ್ವಾಮೀಜಿ ನಡೆ

Spread the loveಕೊಪ್ಪಳ, ಅಕ್ಟೋಬರ್​ 14: ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು (Abhinava Gavisiddeshwara Swamiji) ನಡೆದಾಡುವ ದೇವರು ಎಂದೇ ಪ್ರಸಿದ್ದ. ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ