Breaking News

ಸ್ಥಳೀಯ ವ್ಯಾಪಾರಿಗಳ ಬೇಡಿಕೆಗೆ ಪಟ್ಟಣದ ವಿವಿಧ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿದ್ದರಿಂದ ಬಂದ್ ಶಾಂತಿಯುತವಾಗಿ ಸಂಪನ್ನಗೊಂಡಿತು.

Spread the love

ಖಾನಾಪುರ: ಪರಜಿಲ್ಲೆ, ಪರರಾಜ್ಯಗಳಿಂದ ಬಂದು ಪಟ್ಟಣದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವವರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಖಾನಾಪುರ ಶಹರ ವ್ಯಾಪಾರಸ್ಥರ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಖಾನಾಪುರ ಬಂದ್ ಸಂಪೂರ್ಣ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಥಳೀಯ ವ್ಯಾಪಾರಿಗಳ ಬೇಡಿಕೆಗೆ ಪಟ್ಟಣದ ವಿವಿಧ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿದ್ದರಿಂದ ಬಂದ್ ಶಾಂತಿಯುತವಾಗಿ ಸಂಪನ್ನಗೊಂಡಿತು.
ಬಂದ್ ಅಂಗವಾಗಿ ಔಷಧ ಅಂಗಡಿಗಳು, ಪೆಟ್ರೋಲ್ ಬಂಕ್ ಹೊರತುಪಡಿಸಿ ಉಳಿದ ಎಲ್ಲ ಬಗೆಯ ವ್ಯಾಪಾರ ವಹಿವಾಟುಗಳು ನಡೆಯಲಿಲ್ಲ. ಹಣ್ಣು, ತರಕಾರಿ ಮಾರಾಟಗಾರರು, ಬೀದಿ ಬದಿಯ ವ್ಯಾಪಾರಿಗಳು ತಮ್ಮ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ ಬಂದ್ ಕರೆಗೆ ಬೆಂಬಲ ನೀಡಿದರು.
ಬಂದ್ ಕರೆಯ ಅಂಗವಾಗಿ ಸಂಘಟನೆಯ ವತಿಯಿಂದ ಪಟ್ಟಣದ ಪಾರಿಶ್ವಾಡ ವೃತ್ತದಿಂದ ಪ್ರಮುಖ ಬೀದಿಗಳ ಮೂಲಕ ತಹಸೀಲ್ದಾರ್ ಕಚೇರಿ ಮತ್ತು ಪಟ್ಟಣ ಪಂಚಾಯತ್ ಕಚೇರಿಗಳಿಗೆ ಪ್ರತಿಭಟನಾ ಮೆರವಣಿಗೆಯ ಮೂಲಕ ತೆರಳಿದ ಸಂಘಟನೆಯ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಕುರಿತ ಮನವಿಯನ್ನು ತಹಸೀಲ್ದಾರ್ ಮತ್ತು ಪಟ್ಟಣ ಪಂಚಾಯತ್ ಅಧ್ಯಕ್ಷರಿಗೆ ನೀಡಿದರು. ಮುಂದಿನ ದಿನಗಳಲ್ಲಿ ತಾಲೂಕಿನಿಂದ ಹೊರಗಿನವರಿಗೆ ಪಟ್ಟಣದಲ್ಲಿ ಹೊಸದಾಗಿ ವ್ಯಾಪಾರ ನಡೆಸಲು ಅನುಮತಿ ನೀಡಬಾರದು ಎಂದು ಸಂಘಟನೆಯ ಮೂಲಕ ಅಧಿಕಾರಿಗಳನ್ನು ಆಗ್ರಹಿಸಲಾಯಿತು. ಇದಕ್ಕೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.
ಈ ಸಂದರ್ಭದಲ್ಲಿ ಗೌರೀಶ ಸೋನೊಳಿ, ರವಿ ಕಾಡಗಿ, ಶಿವಶಂಕರ್ ಕಟ್ಟೀಮನಿ, ಜಾರ್ಡನ್ ಗೋನ್ಸಾಲ್ವಿಸ್, ವಿನೋದ ಉಂಡಿ, ಜ್ಯೋತಿಬಾ ಅಲ್ಲೋಳಕರ, ಪ್ರವೀಣ ಅಗಣೋಜಿ, ಗಿರೀಶ ಸೋನೊಳಿ, ಅಪ್ಪಯ್ಯ ಕೊಡೊಳಿ ಮತ್ತಿತರರು ಇದ್ದರು.

Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ