Breaking News
Home / ನವದೆಹಲಿ / ಇಂದು ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಪ್ರವಾಸ : ಸಂವಿಧಾನ ದಿವಸ ಆಚರಣೆಯಲ್ಲಿ ಭಾಗಿ

ಇಂದು ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಪ್ರವಾಸ : ಸಂವಿಧಾನ ದಿವಸ ಆಚರಣೆಯಲ್ಲಿ ಭಾಗಿ

Spread the love

ದಾವಣಗೆರೆ : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆಗೆ ಭೇಟಿ ನೀಡಲಿದ್ದಾರೆ.ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿವಸ ಆಚರಣೆ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

 

ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ 11.30 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಶಾಸಕರಾದ ಎಸ್.ಎ.ರವೀಂದ್ರನಾಥ್ ಅವರ ಅಮೃತ ಮಹೋತ್ಸವ ಅಭಿನಂದನಾ ಸಮಾರಂಭ ಮತ್ತು ಎಸ್.ಎ.ಆರ್ ಕುರಿತ ‘ಕೃಷಿ ಕಣ್ಮಣಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವರು.

ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗಕ್ಕೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ